ಬೆಂ.ಗ್ರಾ.ಜಿಲ್ಲೆ: ಸಮಾಜ ಕಲ್ಯಾಣ ಇಲಾಖೆಯಡಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸ್ವಯಂ ಸೇವಾ ಸಂಸ್ಥೆಗಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಸ್ವಯಂ ಸೇವಾ ಸಂಸ್ಥೆಗಳು ನೋಂದಾಯಿತ ಸಂಸ್ಥೆಯಾಗಿದ್ದು, ನೋಂದಣಿ ಪ್ರಮಾಣ ಪತ್ರ ಚಾಲ್ತಿಯಲ್ಲಿರಬೇಕು,ಮೂರು ವರ್ಷದ ಲೆಕ್ಕ ಪರಿಶೋಧನಾ ವರದಿ ದೃಢೀಕೃತ ಪ್ರತಿ ಸಲ್ಲಿಸಬೇಕು. ಎಸ್.ಸಿ/ಎಸ್.ಟಿ ಸಮುದಾಯದ ಅಭಿವೃದ್ಧಿಗಾಗಿ 5 ವರ್ಷ ಸೇವೆ ಸಲ್ಲಿಸಿರಬೇಕು, ಸೇವೆ ಸಲ್ಲಿಸಿರುವ ದೃಢೀಕೃತ ದಾಖಲೆಯನ್ನು ಸಲ್ಲಿಸಬೇಕು. ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಿರುವ ಬಗ್ಗೆ ದಾಖಲೆಗಳು,ಛಾಯಾಚಿತ್ರಗಳು ಮತ್ತು ಪತ್ರಿಕಾ ವರದಿಗಳನ್ನು ಸಲ್ಲಿಸಬೇಕು.ಕಾರ್ಯಾಗಾರಗಳನ್ನು ಆಯೋಜನೆ ಮಾಡುವ ಬಗ್ಗೆ ಮುಚ್ಚಳಿಕೆ ಪತ್ರ ಸಲ್ಲಿಸಬೇಕು.
ಅರ್ಹ ಸ್ವಯಂ ಸೇವಾ ಸಂಸ್ಥೆಗಳು ಆಗಸ್ಟ್ 19 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕೊಠಡಿ ಸಂಖ್ಯೆ:217, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ದೂ.ಸಂಖ್ಯೆ:29787447. ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ತಾಲ್ಲೂಕು ದೂ.ಸಂಖ್ಯೆ:27681784, ದೊಡ್ಡಬಳ್ಳಾಪುರ ತಾಲ್ಲೂಕು ದೂ.ಸಂಖ್ಯೆ:27623681, ಹೊಸಕೋಟೆ ತಾಲ್ಲೂಕು ದೂ.ಸಂಖ್ಯೆ:27931528, ನೆಲಮಂಗಲ ತಾಲ್ಲೂಕು ದೂ.ಸಂಖ್ಯೆ:27723172 ಗೆ ಸಂಪರ್ಕಿಸಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.