ರಾಜಸ್ಥಾನ: ದೌಸಾ ಜಿಲ್ಲೆಯ ಬಾಪಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಕ್ಕಳು ಸೇರಿ 10 ಜನ ಸಾವನ್ನಪ್ಪಿದ್ದಾರೆ. ಗಾಯಗೊಂಡ 9 ಜನರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
3 ಮಂದಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಯಾಣಿಕರ ಪಿಕಪ್ ವಾಹನ ಮತ್ತು ಟ್ರೇಲರ್ ಟ್ರಕ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಎಸ್ಪಿ ಸಾಗರ್ ರಾಣಾ ಮಾತನಾಡಿ, ಖಾತು ಶ್ಯಾಮ್ ದೇವಸ್ಥಾನದಿಂದ ಭಕ್ತರು ಬರುವಾಗ ಅಪಘಾತ ಸಂಭವಿಸಿದೆ ನಿಂತಿದ್ದ ಟ್ರಕ್ ಗೆ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ ಎಂಬ ಮಾಹಿತಿ ಬಂದಿದ್ದು, ಇಲ್ಲಿಯವರೆಗೆ 10 ಜನರು ಸಾವನ್ನಪ್ಪಿದ್ದಾರೆ. ಸುಮಾರು 7-8 ಜನರನ್ನು ಜೈಪುರದ ಎಸ್‌ಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ದೌಸಾ ಜಿಲ್ಲಾಧಿಕಾರಿ ದೇವೇಂದ್ರ ಕುಮಾರ್, ಆರಂಭಿಕ ವರದಿಗಳ ಪ್ರಕಾರ, ಬಾಪಿ ಬಳಿ ಸಂಭವಿಸಿದ ಅಪಘಾತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. 9 ಜನರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.