ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಆಗಸ್ಟ್ 19ರಂದು ಬೆಳಿಗ್ಗೆ 10ಕ್ಕೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಜಿಲ್ಲೆಯ ರೈತರಿಗೆ ಗೋಡಂಬಿ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಗಳ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಇರುವಕ್ಕಿಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ವಿಜ್ಞಾನಿಗಳಾದ ಡಾ. ಸದಾಶಿವ ನಡುಕೇರಿಇವರುಗೋಡಂಬಿ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಗಳ ಕುರಿತುಮಾಹಿತಿ ನೀಡುವರು. ನಂತರ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಗ್ರಾಮದ ಪ್ರಗತಿಪರ ರೈತರು ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಬಿ.ಎಸ್.ರಘುನಾಥ, ಚಳ್ಳಕೆರೆ ತಾಲ್ಲೂಕಿನ ಮೀರಸಾಬಿಹಳ್ಳಿ ಗ್ರಾಮದ ಪ್ರಗತಿಪರ ರೈತರಾದ ದಯಣ್ಣ ಬಿ.ಕೆ ಮತ್ತು ಚಿಕ್ಕಚೆಲ್ಲೂರು ಗ್ರಾಮದ ಪ್ರಗತಿಪರ ಕೃಷಿಕರಾದ ಎನ್.ತಿಪ್ಪೇಸ್ವಾಮಿ ಅವರು ರೈತರಿಗೆ ಗೋಡಂಬಿ ಬೆಳೆಯಲ್ಲಿ ಯಶಸ್ವಿಯಾಗಿ ಹೆಚ್ಚಿನ ಇಳುವರಿ ಪಡೆಯಲು ತಾವು ಅನುಸರಿಸಿದ ಕ್ರಮಗಳ ಕುರಿತು ಅನುಭವವನ್ನು ಹಂಚಿಕೊಳ್ಳುವರು. ಆದ ಪ್ರಯುಕ್ತ, ಆಸಕ್ತ 50 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಮೊಬೈಲ್ ಸಂಖ್ಯೆ 8277931058 ಗೆ ಕರೆಮಾಡಿ ನೋಂದಣಿ ಮಾಡಿಕೊಂಡು ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು. ಮೊದಲು ನೋಂದಾವಣಿ ಮಾಡಿಕೊಂಡ 50ಜನ ರೈತ ಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು.ಕಡ್ಡಾಯವಾಗಿ ತಮ್ಮ ಎಫ್ಐಡಿ ಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿ ತರಬೇಕು ಎಂದು ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.