ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯಾದ್ಯಂತ ಎರಡು ದಿನ ಬಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳವಾರ ಮತ್ತು ಬುಧವಾರ ರಾಜ್ಯದಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಆಗಸ್ಟ್ 19 ಮತ್ತು 20ರಂದು ರಾಜ್ಯಾದ್ಯಂತ ವ್ಯಾಪಕ ಮಳೆ ಆಗಲಿದೆ. ಆಗಸ್ಟ್ 21ರಂದು ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಮೋಡ ಕವಿದ ವಾತಾವರಣ ಇರಲಿದೆ. ತಿಂಗಳ ಕೊನೆಯ ವಾರದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಬಿಸಿಲಿನ ವಾತಾವರಣ ನಿರ್ಮಾಣವಾಗಲಿದೆ. ಬೆಂಗಳೂರಿನಲ್ಲಿ ಐದು ದಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.