ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಯಾವುದೇ ಅನಗತ್ಯ ಹೇಳಿಕೆಗಳನ್ನು ನೀಡಬಾರದು ಎಂದು ಸಿಎಂ ಸಿದ್ದರಾಮಯ್ಯ ಅವರು ಸಂಪುಟ ಸಹೇದ್ಯೋಗಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ತಮ್ಮ ವೈಯಕ್ತಿಕ ಅಭಿಪ್ರಾಯ ಮತ್ತು ಸಚಿವರ ಅಭಿಪ್ರಾಯದ ನಡುವೆ ವ್ಯತ್ಯಾಸವಿದೆ ಎನ್ನುವುದು ಗಮನದಲ್ಲಿ ಇರಬೇಕು. ಸರ್ಕಾರದ ನಿಲುವಿನ ಬಗ್ಗೆ ವಿಧಾನಸೌಧದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.
ಗೃಹ ಸಚಿವ ಪರಮೇಶ್ವರ್ ಈ ಬಗ್ಗೆ ಉತ್ತರ ನೀಡಬೇಕು. ಉಳಿದ ಸಚಿವರು ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದಿದ್ದಾರೆ.