ನವದೆಹಲಿ : ಆನ್‌ಲೈನ್ ಬೆಟ್ಟಿಂಗ್ ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸುವ ಆನ್‌ಲೈನ್ ಗೇಮಿಂಗ್ ತಡೆ ಮಸೂದೆಯನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ.
ಆಗಸ್ಟ್ 19ರ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಆನ್‌ಲೈನ್ ಗೇಮಿಂಗ್ ಮಸೂದೆಗೆ ಅನುಮೋದನೆ ನೀಡಿದೆ. ಆನ್‌ಲೈನ್ ಬೆಟ್ಟಿಂಗ್ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಮೂಲಗಳು ತಿಳಿಸಿದ್ದು, ಈ ಮಸೂದೆಯನ್ನು ಆಗಸ್ಟ್ 20 ರ ಬುಧವಾರ (ಇಂದು) ಲೋಕಸಭೆಯಲ್ಲಿ ಪರಿಚಯಿಸುವ ಸಾಧ್ಯತೆಯಿದೆ.
ಇತ್ತೀಚಿನ ತಿಂಗಳಲ್ಲಿ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಈ ಮಸೂದೆ ಮಂಡನೆಗೆ ಕೇಂದ್ರ ಮುಂದಾಗಿದೆ. ಈಗಾಗಲೇ ಬೆಟ್ಟಿಂಗ್ ಆ್ಯಪ್ ಪ್ರಮೋಷನ್‌ನಲ್ಲಿ ಸ್ಟಾರ್‌ಗಳೂ ಭಾಗಿಯಾಗಿ ವಿಚಾರಣೆ ಎದುರಿಸುತ್ತಿದ್ದಾರೆ. ಮೂಲಗಳ ಪ್ರಕಾರ, ಆನ್‌ಲೈನ್ ಗೇಮ್ ಆ್ಯಪ್‌ಗಳಿಗೆ ಬ್ಯಾಂಕ್‌ಗಳು, ಸಂಸ್ಥೆಗಳು ಹಣ ವಹಿವಾಟಿಗೆ ಅನುಮತಿ ಕೊಡಬಾರದಂತೆ ನಿರ್ಬಂಧ ಹೇರುವ ಸಾಧ್ಯತೆ ಇದೆ.