ಬೆಂಗಳೂರು : ಯೂಟ್ಯೂಬರ್ ಸಮೀರ್.ಎಮ್.ಡಿ ಬಂಧನಕ್ಕೆ ಬೆಂಗಳೂರಿನಲ್ಲಿರುವ ಅವನ ಮನೆಯನ್ನು ಧರ್ಮಸ್ಥಳ ಪೊಲೀಸರು ಸುತ್ತುವರೆದಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಸಂಬಂಧ ನೋಟಿಸ್ ನೀಡಿದರೂ ಠಾಣೆಗೆ ವಿಚಾರಣೆಗೆ ಹಾಜರಾಗದ ಯೂಟ್ಯೂಬರ್ ಸಮೀರ್.ಎಮ್.ಡಿ ಬಂಧನ ಮಾಡಲು ವಾರೆಂಟ್ ಜೊತೆ ಧರ್ಮಸ್ಥಳ ಪೊಲೀಸ್ ಸಬ್ ಇನ್ಸೆಕ್ಟರ್ ಆನಂದ್.ಎಮ್ ನೇತೃತ್ವದ ತಂಡ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಯೂಟ್ಯೂಬರ್ ಸಮೀರ್.ಎಮ್.ಡಿ ಬಾಡಿಗೆ ಮನೆಯನ್ನು ಆ.21 ರಂದು ಸುತ್ತುವರಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸ್ವತಃ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಹಾಕಿದ್ದಾರೆ.
ಇನ್ನು ಸಮೀರ್ ನನ್ನು ಬಂಧಿಸಿ ಧರ್ಮಸ್ಥಳ ಠಾಣೆಗೆ ಕರೆ ತರಲಿದ್ದಾರೆ.