ಬೆಂಗಳೂರು: ಬಂಧನ ಭೀತಿ ಎದುರಿಸುತ್ತಿದ್ದ ಸಮೀರ್ ಎಂ.ಡಿ.ಗೆ ನ್ಯಾಯಾಲಯ ರಿಲೀಫ್ ನೀಡಿದೆ. ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದರಿಂದ ಸಮೀರ್ ಬಂಧನದಿಂದ ಪಾರಾಗಿದ್ದಾರೆ.
ನಿರೀಕ್ಷಣಾ ಜಾಮೀನು ಕೋರಿ ಆಗಸ್ಟ್ 19ರಂದು ಸಮೀರ್ ಎಂಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿಯನ್ನು ಹಾಕಿದ್ದರು. ಇದೀಗ ಆಗಸ್ಟ್ 21ರಂದು ಗುರುವಾರ ಕೋರ್ಟ್ ನಿರೀಕ್ಷಣಾ ಜಾಮೀನನ್ನು ಮಂಜೂರು ಮಾಡಿದೆ.