ದಾವಣಗೆರೆ ಆಗಸ್ಟ್ 21 (ಕರ್ನಾಟಕ ವಾರ್ತೆ): ಪ್ರಸಕ್ತ ಸಾಲಿನ ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪ್ರವಾಸೋದ್ಯಮ, ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲು ಬಾಕಿ ಉಳಿದಿರುವ ಗುರಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಬಾಕಿ ಉಳಿದಿರುವ ಪರಿಶಿಷ್ಟ ಜಾತಿ 1, ಪರಿಶಿಷ್ಟ ಪಂಗಡದ 1 ಅಭ್ಯರ್ಥಿಗಳ ಗುರಿ ಹೊಂದಲಾಗಿದೆ. ಇದರಡಿ ಪಡೆಯುವ ಸೌಲಭ್ಯ ಪಡೆಯುವ ಆಸಕ್ತರು ಅರ್ಜಿ ಸಲ್ಲಿಸಬಹುದು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 25 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ದಾವಣಗೆರೆ ದೂ.ಸಂ:08192-230123 ನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ಕಾವ್ಯ ತಿಳಿಸಿದ್ದಾರೆ.