ಮಂಗಳೂರು: ಮುಂಬರುವ ಗಣೇಶೋತ್ಸವದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಲಿದ್ದು, ಈ ಹಿನ್ನೆಲೆಯಲ್ಲಿ ಜನರ ಅನುಕೂಲಕ್ಕಾಗಿ ರೈಲ್ವೆ ಇಲಾಖೆ ಬೆಂಗಳೂರು-ಮಂಗಳೂರು ನಡುವೆ ಎರಡು ವಿಶೇಷ ರೈಲು ಸಂಚಾರ ಸೌಲಭ್ಯವನ್ನು ಕಲ್ಪಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ತಮ್ಮ ಮನವಿ ಮೇರೆಗೆ ಬೆಂಗಳೂರು ಮತ್ತು ಮಂಗಳೂರು ನಡುವೆ ವಿಶೇಷ ರೈಲುಗಳನ್ನು ಘೋಷಿಸಲಾಗಿದ್ದು, ಚೌತಿಯ ಮುನ್ನಾ ದಿನದಂದು ಊರಿಗೆ ವಾಪಸಾಗಲು ಅನುಕೂಲವಾಗುವಂತೆ ಪ್ರಯಾಣಿಕರಿಗಾಗಿ ಎರಡು ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಹಬ್ಬವನ್ನು ಜನರು ತಮ್ಮ ಕುಟುಂಬದೊಂದಿಗೆ ಆಚರಿಸಿಕೊಳ್ಳಲು ಅನುಕೂಲವಾಗುವಂತೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಿಕೊಟ್ಟ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಮತ್ತು ವಿ. ಸೋಮಣ್ಣ ಅವರಿಗೆ ಕೃತಜ್ಞತೆ ಸಲ್ಲಿಸಿರುವುದಾಗಿ ಸಂಸದ ಕ್ಯಾ.ಚೌಟ ತಿಳಿಸಿದ್ದಾರೆ.