ಬೆಂಗಳೂರು: ಧರ್ಮಸ್ಥಳ ವಿರುದ್ಧ ವಿಡಿಯೋ ಮೂಲಕ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಯಾವಾಗ ಪೊಲೀಸರು ಅರೆಸ್ಟ್ ಮಾಡಲು ಮುಂದಾದ್ದರೋ ಸಮೀರ್ ಕೂಡಲೇ ಮಂಗಳೂರು ಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಮಂಗಳೂರು ಕೋರ್ಟ್, ಸಮೀರ್ ಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ. ಇದರೊಂದಿಗೆ ಸಮೀರ್ ಬಂಧನದಿಂದ ಪಾರಾಗಿದ್ದಾರೆ. ಆದರೆ ಇಂದು ಸಮೀರ್ ವಿಚಾರಣೆಗೆ ದಿನಾಂಕ ನಿಗದಿ ಮಾಡಲಾಗಿದೆ. ಇಂದು ಸಮೀರ್ ಧರ್ಮಸ್ಥಳ ಪೊಲೀಸರ ಮುಂದೆ ವಿಚಾರಣೆಗೆ ಬರುತ್ತಾರ ಎಂಬುದು ನೋಡಬೇಕಿದೆ.
ಧರ್ಮಸ್ಥಳ ವಿರುದ್ಧ ವಿಡಿಯೋ ಮೂಲಕ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು ಜುಲೈ 12ರಂದು ಸಮೀರ್ ವಿರುದ್ಧ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದರು.ಎಫ್ಐಆರ್ ಸಂಖ್ಯೆ 0042/2025ರ ಅನ್ವಯ, ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಸಮೀರ್ ಅವರನ್ನು ಪ್ರಮುಖ ಆರೋಪಿಯನ್ನಾಗಿ (ಎ1) ಹೆಸರಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ, ವಿಚಾರಣೆಗೆ ಹಾಜರಾಗುವಂತೆ ಧರ್ಮಸ್ಥಳ ಪೊಲೀಸರು ಸೂಚಿಸಿದ್ದರು. ಇನ್ನೂ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಸಂಬಂಧಿಸಿದಂತೆ ಎಲ್ಲಾ ರೀತಿಯ ವಿಚಾರಣೆಗೆ ಬರುತ್ತಾನೆ. ಆದರೆ ಧರ್ಮಸ್ಥಳದ ಬದಲು ಬೇರೆ ಯಾವುದೇ ಠಾಣೆಯಲ್ಲಿ ವಿಚಾರಣೆಗೆ ಕರೆದರೆ ಹಾಜರಾಗುತ್ತೇನೆ. ಅದೇ ಧರ್ಮಸ್ಥಳದಲ್ಲೇ ಹಾಜರಾಗಬೇಕು ಎಂದರೆ ಹೆಚ್ಚಿನ ಭದ್ರತೆ ವ್ಯವಸ್ಥೆ ಮಾಡಬೇಕು ಹಾಗೂ ವಿಡಿಯೋ ಸಂವಾದದ ಮೂಲಕ ವಿಚಾರಣೆಗೆ ಹಾಜರಾಗುವ ಅವಕಾಶ ನೀಡಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾನೆ.