ಧರ್ಮಸ್ಥಳ ಪ್ರಕರಣದಲ್ಲಿ ಇದೀಗ ದೂರುದಾರ ಚಿನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ಅವರು ನಿನ್ನೆ ಮಧ್ಯಾಹ್ನ 2 ಗಂಟೆಯಿಂದ ಮಾಸ್ಕ್ ಮ್ಯಾನ್ ವಿಚಾರಣೆ ನಡೆಸಿದ್ರು. ಸುದೀರ್ಘ ವಿಚಾರಣೆ ಬಳಿಕ ಚಿನ್ನಯ್ಯನನ್ನು ವಶಕ್ಕೆ ಪಡೆಯಲಾಗಿದೆ.
ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟ್ಗೆ ಮಾಸ್ಕ್ಮ್ಯಾನ್ ನನ್ನ ಎಸ್ಐಟಿ ಅಧಿಕಾರಿಗಳು ಹಾಜರುಪಡಿಸಿದ್ದಾರೆ. ಇದೀಗ ದೂರುದಾರ ಮಾಸ್ಕ್ ಮ್ಯಾನ್ ನನ್ನನ್ನು 10 ದಿನ ಎಸ್ ಐ ಟಿ ಕಸ್ಟಡಿಗೆ ನೀಡಿ ಬೆಳ್ತಂಗಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸುದೀರ್ಘ ವಿಚಾರಣೆ ನಡೆಸಿದ ಎಸ್ ಐ ಟಿ ಇಂದು ಮಾಸ್ಕ್ ಮ್ಯಾನ್ ನನ್ನನ್ನು ವಶಕ್ಕೆ ಪಡೆದು ಕೋರ್ಟ್ ಗೆ ಹಾಜರುಪಡಿಸಿ ನಂತರ ತಮ್ಮ ವಶಕ್ಕೆ ನೀಡುವಂತೆ ಕೇಳಿಸಿಕೊಂಡರು.
ಪೊಲೀಸರು ಮನವಿ ಸ್ವೀಕರಿಸಿದ ಕೋರ್ಟ್ ಮಾಸ್ಕ್ ಚಿನ್ನಯ್ಯನನ್ನು 10 ದಿನ ಎಸ್ ಐ ಟಿ ವಶಕ್ಕೆ ನೀಡಿ ಬೆಳ್ತಂಗಡಿ ನ್ಯಾಯಾಲಯ ಆದೇಶ ಹೊರಡಿಸಿದೆ.