ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಇಡಿ ಅಧಿಕಾರಿಗಳು ಕಸ್ಟಡಿಗೆ ಪಡೆದಿದ್ದಾರೆ.
ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯವರನ್ನು ಇಡಿ ಅಧಿಕಾರಿಗಳು ಸಿಕ್ಕಿಂನಲ್ಲಿ ಬಂಧಿಸಿದ್ದರು. ಶಾಸಕರನ್ನು ಬೆಂಗಳೂರುನ 35ನೇ ಸಿಸಿಹೆಚ್ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಕೋರ್ಟ್ ಆಗಸ್ಟ್ 28ರವರೆಗೆ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಶಾಸಕ ವೀರೇಂದ್ರ ಪಪ್ಪಿ ಅವರ ಕಂಪನಿಗಳಿಂದ ಗೇಂಮಿಂಗ್ ಆ್ಯಪ್ ಗಳಿಗೆ ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪ ಹಾಗೂ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ವೀರೇಂದ್ರ ಪಪ್ಪಿ ಹಾಗೂ ಸಹೋದರರ ಮನೆ, ಕಂಪನಿ, ಕಚೇರಿಗಳ ಮೇಲೆ ದಾಳಿ ನಡೆಸಿದ್ದರು.