ಬೆಂಗಳೂರು: 2025ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಕುರಿತು ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕೆಲವು ನಿರ್ದೇಶನಗಳನ್ನು ನೀಡಿದ್ದು, ಅದರಂತೆ ಕ್ರಮಕೈಗೊಳ್ಳಲು ಹಾಗೂ ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ.
ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಅನಧಿಕೃತವಾಗಿ ತಯಾರಿಸುವ /ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹ/ ಬಣ್ಣಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವೈಜ್ಞಾನಿಕ ರೀತಿಯಲ್ಲಿ ವಿಸರ್ಜಿಸುವುದು ಕಡ್ಡಾಯ.!