ಚಿತ್ರದುರ್ಗ: ಮಹಾರಾಷ್ಟ್ರದ ನಾಗಪುರದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬೌದ್ಧ ಧರ್ಮದ ದೀಕ್ಷಾ ಭೂಮಿಗೆ ಭೇಟಿ ನೀಡಲು ಆಸಕ್ತ ಅಂಬೇಡ್ಕರ್ ಅನುಯಾಯಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಗಸ್ಟ್ 25 ರಿಂದ ಸೆಪ್ಟೆಂಬರ್ 09 ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಯಾತ್ರಾರ್ಥಿಗಳು ಬಿಪಿಎಲ್ ಕಾರ್ಡ್ ಹೊಂದಿರಬೇಕು. ಎಸ್.ಸಿ, ಎಸ್.ಟಿ ವರ್ಗಕ್ಕೆ ಸೇರಿರಬೇಕು. 18 ವರ್ಷ ಮೇಲ್ಪಿಟ್ಟಿರಬೇಕು. ಅಂಬೇಡ್ಕರ್ ಚಿಂತನೆಗಳ ಬಗ್ಗೆ ಅರಿವು ಹೊಂದಿರುವ ಸಮಾಜ ಸೇವೆ ಮಾಡಿದ ಅನುಭವ ಹೊಂದಿರಬೇಕು.
ಈಗಾಗಲೇ ಸರ್ಕಾರದ ವೆಚ್ಚದಲ್ಲಿ ಪ್ರವಾಸ ಹೋಗಿದ್ದವರು, ಸರ್ಕಾರಿ ಮತ್ತು ಅದರ ಅಂಗ ಸಂಸ್ಥೆಗಳಲ್ಲಿ ಸೇವೆಯಲ್ಲಿರುವವರು ಈ ಸೌಲಭ್ಯಕ್ಕೆ ಅರ್ಹರಲ್ಲ. ಯಾತ್ರೆಗೆ ಹೋಗಿ ಬರುವ ಪ್ರಯಾಣ ವೆಚ್ಚವನ್ನು ಮಾತ್ರ ಸರ್ಕಾರದಿಂದ ಭರಿಸಲಾಗುವುದು. ವಸತಿ ಮತ್ತು ಭೋಜನಾ ವೆಚ್ಚವನ್ನು ಯಾತ್ರಾರ್ಥಿಗಳೇ ಭರಿಸಬೇಕು ಎಂದು ಹೊಳಲ್ಕೆರೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಗ್ರೇಡ್-2 ಬಿ.ಚನ್ನಬಸಪ್ಪ ತಿಳಿಸಿದ್ದಾರೆ.