ಬೆಂಗಳೂರು : ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರ ಮುಂದುವರೆದಿದ್ದು ಇಂದು ಕೂಡ ವರುಣಾರ್ಭಟ ಮುಂದುವರೆಯುವ ಸಾಧ್ಯತೆ ಇದೆ.
ಹಾಗಾಗಿ ರಾಜ್ಯದ ಮೂರು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಯ ಟಿಕೆ ಸ್ವರೂಪ ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಅದೇ ರೀತಿ ಶಿವಮೊಗ್ಗ ಜಿಲ್ಲೆಯಲ್ಲಿ ಸಹ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗು ಸಾಗರ ತಾಲೂಕಿನ ಅಂಗನವಾಡಿ ಶಾಲಾ ಕಾಲೇಜುಗಳಿಗೆ ಮಾತ್ರ ರಜೆ ಘೋಷಿಸಿ ಸಾಗರ ತಹಸೀಲ್ದಾರ್ ಆದೇಶ ಹೊರಡಿಸಿದ್ದಾರೆ. ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲೂ ಕೂಡ ಮಳೆ ಆರ್ಭಟ ಮುಂದುವರೆದ ಹಿನ್ನೆಲೆ ಜಿಲ್ಲೆಯ 10 ತಾಲೂಕುಗಳಿಗೆ ರಜೆ ಘೋಷಿಸಲಾಗಿದೆ.
ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೇ ಹಾಗು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಜೋಯಿಡ, ಯಲ್ಲಾಪುರ ಹಾಗು ದಾಂಡೇಲಿ ತಾಲೂಕುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ.