ಆ. 31 ರಂದು ಪ್ರಧಾನಿ ಮೋದಿ ಚೀನಾಗೆ ಭೇಟಿ ನೀಡಲಿದ್ದಾರೆ. ಟಿಯಾಂಜಿನ್ನಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಚೀನಾದಲ್ಲಿ ಭೇಟಿಯಾಗಲಿದ್ದಾರೆ.
SCO ಶೃಂಗಸಭೆಗಾಗಿ ಚೀನಾದಲ್ಲಿ ಪ್ರಧಾನಿ ಮೋದಿ ಅವರು ಜಿನ್ಪಿಂಗ್, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಹಲವಾರು ಮಧ್ಯ ಏಷ್ಯಾದ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು.
ಕಳೆದ ತಿಂಗಳು, ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಚೀನಾದಲ್ಲಿ ಕ್ಸಿ ಜಿನ್ಪಿಂಗ್ ಅವರನ್ನು ಭೇಟಿಯಾದರು, 2020 ರಲ್ಲಿ ಉಭಯ ರಾಷ್ಟ್ರಗಳ ನಡುವಿನ ಸಂಬಂಧಗಳು ಹದಗೆಟ್ಟ ನಂತರ ಅವರು ದೇಶಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ.