ಅಹಮದಾಬಾದ್ : 2018ರ ಬಿಟ್‌ಕಾಯಿನ್ ಸುಲಿಗೆ ಪ್ರಕರಣದಲ್ಲಿ BJP ಮಾಜಿ ಶಾಸಕ ನಳಿನ್ ಕೊಟಾಡಿಯಾ ಸೇರಿ 14 ಆರೋಪಿಗಳಿಗೆ ಅಹಮದಾಬಾದ್ ನಗರ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಸೂರತ್ ಮೂಲದ ಬಿಲ್ಡರ್, ಕ್ರಿಸ್ಟೋಕರೆನ್ಸಿ ವ್ಯಾಪಾರಿ ಶೈಲೇಶ್ ಭಟ್ ಅವರ ಅಪಹರಣದೊಂದಿಗೆ ಪ್ರಾರಂಭವಾದ ಈ ಪ್ರಕರಣವು ಗುಜರಾತ್‌ನಲ್ಲಿ ರಾಜಕಾರಣಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಮಧ್ಯವರ್ತಿಗಳ ನಡುವಿನ ಅಕ್ರಮವನ್ನು ಬಹಿರಂಗಪಡಿಸಿತ್ತು. ಸರ್ಕಾರ ಆರೋಪಿಗಳ ವಿರುದ್ಧ 172 ಸಾಕ್ಷಿಗಳನ್ನು ಹಾಜರು ಪಡಿಸಿದ್ದನ್ನು ನೆನಪಿಸಿಕೊಳ್ಳಬಹುದು.!