ಧರ್ಮಸ್ಥಳ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಈಗಾಗಲೇ ನಿಗೂಢವಾಗಿ ಸಾವನಪ್ಪಿದ ವ್ಯಕ್ತಿಗಳ ಕುರಿತಂತೆ ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟೆಣ್ಣನವರ್ ದಾಖಲೆಗಳನ್ನು ಬಿಡುಗಡೆ ಮಾಡಿದ ಬಳಿಕ ಇದೀಗ ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಎಸ್ ಐಟಿ ತನಿಖೆ ಪ್ರಾರಂಭಿಸಿದೆ.
ಶುಕ್ರವಾರ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಆಗಮಿಸಿದ್ದ ಗಿರೀಶ್ ಮಟ್ಟೆಣ್ಣವರ್ ವಿಶೇಷ ತನಿಖಾ ತಂಡದ ಅಧಿಕಾರಿಗಳನ್ನು ಭೇಟಿ ನೀಡಿ ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿಗೂಢ ಸಾವನ್ನಪ್ಪಿದ ಶವಗಳ ವಿಲೇವಾರಿ ಕ್ರಮಬದ್ಧವಾಗಿ ಆಗಿಲ್ಲ ಎಂಬುದನ್ನು ದಾಖಲೆ ಸಹಿತ ದೂರು ನೀಡಿದ್ದರು.
ಇದರ ಬೆನ್ನಲ್ಲೇ ಧರ್ಮಸ್ಥಳ ಗ್ರಾಮ ಪಂಚಾಯತ್ನಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಇತರ ಸಿಬ್ಬಂದಿಯನ್ನು ಕರೆಸಿಕೊಂಡು ಎಸ್ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ದೂರುದಾರ ನೀಡಿದ ದಾಖಲೆ ಮತ್ತು ಪಂಚಾಯಿತಿಯಲ್ಲಿರುವ ದಾಖಲೆಗಳನ್ನು ಪರಸ್ಪರ ತಾಳೆ ಮಾಡಿ ತನಿಖೆ ಆರಂಭಿಸಿದ್ದಾರೆ.