ಬೆಂ.ಗ್ರಾ.ಜಿಲ್ಲೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ 2025-26ನೇ ಸಾಲಿನ ಕಾನೂನು ಪದವೀಧರರಿಗೆ ವಕೀಲ ವೃತ್ತಿಯ ತರಬೇತಿ ಪಡೆಯಲು ಜಿಲ್ಲಾ ವ್ಯಾಪ್ತಿಗೆ ಒಳಪಡುವ ಅಲ್ಪಸಂಖ್ಯಾತ ವರ್ಗದ ಅಭ್ಯರ್ಥಿಗಳಿಂದ ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 15 ರೊಳಗೆ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ 216, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು ಇಲ್ಲಿಗೆ ಸಲ್ಲಿಸುವುದು.
ವಾರ್ಷಿಕ ಆದಾಯ 3.50,000/- ಮೀರಿರಬಾರದು. ಅಭ್ಯರ್ಥಿಗಳು ಬಾರ್ ಕೌನ್ಸಿಲ್ನಲ್ಲಿ ಹೆಸರನ್ನು ನೊಂದಾಯಿಸಿರಬೇಕು. ಕಾನೂನು ಪದವೀಧರರಾಗಿದ್ದು, ಈ ತರಬೇತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 38 ವರ್ಷಗಳೊಳಗೆ ಇರಬೇಕು. 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗರಬೇಕು (Passing/Provisional Certificate ಸಲ್ಲಿಸುವುದು).ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ತಿಂಗಳಿಗೆ ರೂ.5000/-ಗಳ ತರಬೇತಿ ಭತ್ಯೆಯನ್ನು ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಮಧ್ಯಂತರದಲ್ಲಿ ಬಿಟ್ಟು ಹೋಗಬಾರದು ಹಾಗೆ ಬಿಟ್ಟು ಹೊದ ಪಕ್ಷದಲ್ಲಿ ತರಬೇತಿ ಅವಧಿಯಲ್ಲಿ ಪಾವತಿಸಿದ ಶಿಷ್ಯವೇತನ ವಾಪಸ್ಸು ಪಡೆಯಲಾಗುವುದು ಹಾಗೂ ಈ ನಿಯಮ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ದಿಮೆಯಲ್ಲಿ ನೇಮಕ ಹೊಂದುವವರಿಗೆ ಅನ್ವಯಿಸುವುದಿಲ್ಲ. ಸುಳ್ಳು ದಾಖಲೆ ಮಾಹಿತಿಯನ್ನು ಒದಗಿಸಿ ಆಯ್ಕೆಯಾದ ಅಭ್ಯರ್ಥಿಗನ್ನು ಕಾನೂನಿನ ಅನ್ವಯ ಶಿಕ್ಷೆಗೆ ಗುರಿ ಪಡಿಸಲಾಗುವುದು ಹಾಗೂ ತರಬೇತಿ ಅವಧಿಯಲ್ಲಿ ಪಾವತಿಸಿದ ಶಿಷ್ಯವೇತನ ಶೇ.10 ರಂತೆ ಬಡ್ಡಿಯೊಂದಿಗೆ ವಸೂಲಿ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ 216, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.