ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ವೆಬ್ ಸೈಟ್ ನಲ್ಲಿ ಲಿಂಕ್ ಬಿಟ್ಟಿದ್ದು, ಅದರ ಮೂಲಕ ಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸಬಹುದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ-ಸೆಟ್ ಗೆ ಅಧಿಸೂಚನೆ ಹೊರಡಿಸಲಾಗಿದೆ. ಆನ್ಲೈನ್ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಬಹುದಾಗಿದೆ. ಇತರೆ ಯಾವುದೇ ವಿಧದಲ್ಲಿ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ. ಒಟ್ಟು 33 ವಿಷಯಗಳುಗೆ ಕೆ- ಸೆಟ್ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.