ಚಿತ್ರದುರ್ಗ: ಕಾಮಗಾರಿಯ ಕಾರ್ಯಾದೇಶ ನೀಡಲು ವಿದ್ಯುತ್ ಗುತ್ತಿಗೆ ದಾರರೊಬ್ಬರಿಂದ ₹ 3.50 ಲಕ್ಷ ಲಂಚ ಪಡೆಯುತ್ತಿದ್ದ ಬೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ತಿಮ್ಮರಾಯಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ತಿಮ್ಮರಾಯಪ್ಪ ಗುರುವಾರ ದಾಳಿ ನಡೆಸಿ ಬಂಧಿಸಿದ್ದಾರೆ.
₹ 35 ಲಕ್ಷ ವೆಚ್ಚದ ಒಟ್ಟು 10 ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲು ಶೇ 10ರಷ್ಟು ಹಣವನ್ನು ಲಂಚದ ರೂಪದಲ್ಲಿ ನೀಡಬೇಕು ಎಂದು ತಿಮ್ಮರಾಯಪ್ಪ ಬೇಡಿಕೆಯಿಟ್ಟಿದ್ದರು. ಈ ಕುರಿತು ಹೊಳಲ್ಕೆರೆ ತಾಲ್ಲೂಕು ದುಮ್ಮಿ ಗ್ರಾಮದ ವಿದ್ಯುತ್ ಗುತ್ತಿಗೆದಾರ ಎಸ್.ಆರ್.ಸಂಜಯ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ನಗರದ ಅಮೃತ ಆಯುರ್ವೇದ ಕಾಲೇಜು ಬಳಿ ದೂರುದಾರರಿಂದ * 3.50 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದರು. ಆರೋಪಿಯನ್ನು ಬಂಧಿಸಿರುವ ಲೋಕಾಯುಕ್ತ ಪೊಲೀಸರು, ಲಂಚದ ಹಣವನ್ನು ಜಪ್ತಿ ಮಾಡಿದರು.
ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ, ಇನ್ಸ್ಪೆಕ್ಟರ್ ಬಸವರಾಜು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.