ಬೆಂಗಳೂರು : ಜಿ.ಎಸ್.ಟಿ ಸುಧಾರಣೆಯಿಂದಾಗಿ ಕರ್ನಾಟಕ ಸರ್ಕಾರ ವಾರ್ಷಿಕ ₹15,000 ದಿಂದ ₹20,000 ಕೋಟಿಯಷ್ಟು ವರಮಾನವನ್ನು ಕಳೆದುಕೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ತೆರಿಗೆದಾರ ಜನತೆ ಮತ್ತು ವ್ಯಾಪಾರಿ ವರ್ಗದ ಮೇಲಿನ ಆರ್ಥಿಕ ಭಾರ ಮತ್ತು ಅನುಷ್ಠಾನದ ಜಂಜಾಟವನ್ನು ತಗ್ಗಿಸಲು ಅತ್ಯಗತ್ಯವಾಗಿದ್ದ ತೆರಿಗೆ ಸುಧಾರಣೆಯನ್ನು ಜಾರಿಗೆ ತರುವ ಸರಕು ಸೇವಾ ತೆರಿಗೆ (ಜಿಎಸ್ಟಿ) ಮಂಡಳಿಯ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ.
ಇದು @narendramodiಸರ್ಕಾರದ ಹೊಸ ಅವಿಷ್ಕಾರವೇನಲ್ಲ. ಅತ್ಯಂತ ಅವಸರದಲ್ಲಿ ಎನ್ ಡಿ ಎ ಸರ್ಕಾರ 2017ರಲ್ಲಿ ದೋಷಪೂರ್ಣ ಜಿ.ಎಸ್.ಟಿ ಯನ್ನು ಜಾರಿಗೊಳಿಸಿದಾಗಲೇ ಲೋಕಸಭೆ ವಿಪಕ್ಷ ನಾಯಕರಾದ @RahulGandhiಮತ್ತು ವಿರೋಧ ಪಕ್ಷಗಳ ನಾಯಕರು ಜಿ.ಎಸ್.ಟಿ ಗೆ ಮಾಡಲೇಬೇಕಾಗಿದ್ದ ಸುಧಾರಣೆಗಾಗಿ ಒತ್ತಾಯಿಸಿದ್ದರು. “ಗಬ್ಬರ್ ಸಿಂಗ್ ತೆರಿಗೆ” ದೇಶದ ಸಣ್ಣ ವ್ಯಾಪಾರಿಗಳ ಸರ್ವನಾಶ ಮಾಡಲಿದೆ