ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೇ 22ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.!
ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಮೂಲಕ ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಆರೋಪದಡಿ ಕಳೆದ 15 ದಿನಗಳಿಂದ ಜಾರಿ ನಿರ್ದೇಶ, ನಾಲಯದ (ಇ.ಡಿ) ವಶದಲ್ಲಿದ್ದ ಇ.ಡಿ ಕಸ್ಟಡಿ ಅವಧಿ ಸೋಮವಾರಕ್ಕೆ ಮುಕ್ತಾಯ ಗೊಂಡ ಕಾರಣ ವೀರೇಂದ್ರ ಅವರನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರು ಶಾಸಕರನ್ನು ನ್ಯಾಯಾಂಗ ಬಂಧನವನ್ನು ಆದೇಶಿಸಿದ್ದಾರೆ.!