ಚಿತ್ರದುರ್ಗ : ಚಿತ್ರದುರ್ಗ ನಗರದಲ್ಲಿ ಸೆ.13 ರಂದು ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ ಮೆರವಣಿಗೆ ಬೃಹತ್ ಶೋಭಾಯಾತ್ರೆಯಲ್ಲಿ 9 ಡಿಜೆ ಗಳು ಭಾಗವಹಿಸಲಿವೆ ಎಂಬುದಾಗಿ ಸುಳ್ಳು ಸುದ್ದಿಯನ್ನು ಫೇಸ್‍ಬುಕ್ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿಸಿದಕ್ಕಾಗಿ ಮಂಜುನಾಥ್ ಎಂಬಾತನ ವಿರುದ್ಧ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಚಿತ್ರದುರ್ಗ ನಗರದಲ್ಲಿ ಸೆ.13 ರಂದು ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ ಸಂದರ್ಭದಲ್ಲಿ ಘರ್ಜಿಸಲು 9 DJ ಮುಂಬೈ, ಬೆಳಗಾವಿ, ಹುಬ್ಬಳ್ಳಿ ಹಾಗೂ ಇನ್ನೂ ಹೆಸರಾಂತ 9 ಡಿಜೆಗಳು ಭಾಗವಹಿಸಲಿವೆ’ ಎಂದು ಸ್ಟೇಟಸ್ ಹಾಕಿದ್ದನು. ಈಗಾಗಲೇ ಜಿಲ್ಲಾಧಿಕಾರಿಗಳು ಗಣಪತಿ ವಿಸರ್ಜನೆ ಹಾಗೂ ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿ.ಜೆ. ಬಳಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಆದರೆ ಮೊಳಕಾಲ್ಮೂರು ತಾಲ್ಲೂಕಿನ ಕೊಂಡ್ಲಹಳ್ಳಿ ಗ್ರಾಮದ ಆರ್.ಮಂಜುನಾಥ ಎಂಬ ವ್ಯಕ್ತಿ ತನ್ನ ಫೇಸ್ ಬುಕ್ ಐಡಿ manju achar prince ನಲ್ಲಿ ‘ಇತಿಹಾಸ ಸೃಷ್ಠಿಸಲು ಸಿದ್ದವಾಗಿದೆ ಚಿತ್ರದುರ್ಗ ಬೃಹತ್ ಶೋಭಾಯಾತ್ರೆ, 13-09-2025 ಶನಿವಾರ ಪ್ರಪಥಮ ಬಾರಿಗೆ ಚಿತ್ರದುರ್ಗ ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆಗೆ ಘರ್ಜಿಸಲು 9 ಆಎ ಮುಂಬೈ, ಬೆಳಗಾವಿ, ಹುಬ್ಬಳ್ಳಿ ಹಾಗೂ ಇನ್ನೂ ಹೆಸರಾಂತ 9 ಡಿಜೆಗಳು ಭಾಗವಹಿಸಲಿವೆ’ ಎಂಬುದಾಗಿ ಸ್ಟೇಟಸ್ ಹಾಕಿದ್ದನು. ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ, ಜನರು ಡಿಜೆ ಬಳಸುವಂತೆ ಪ್ರಚೋದನೆ ಮಾಡಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವಂತ ಕೆಲಸ ಮಾಡಿದ್ದಾನೆ. ಈ ಹಿನ್ನಲೆಯಲ್ಲಿ ಮೊಳಕಾಲ್ಮೂರು ಪೊಲೀಸ್ ಠಾಣೆ ಆರ್.ಮಂಜುನಾಥ ವಿರುದ್ದ ಬಿ.ಎನ್.ಎಸ್.ಎಸ್-2023 ರಿತ್ಯಾ ಕಲಂ 126(2) ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.
ಜಿಲ್ಲಾಡಳಿತ ಶೋಭಾಯಾತ್ರೆ ಮರವಣಿಗೆಯಲ್ಲಿ ಯಾವುದೇ ಡಿ.ಜೆ. ಬಳಕೆಗೆ ಅನುಮತಿ ನೀಡಿರುವುದಿಲ್ಲ. ಸಾರ್ವಜನಿಕರು ಸಾಮಾಜಿಕ ಜಾಲ ತಾಣಗಳಲ್ಲಿನ ಸುಳ್ಳು ಸುದ್ದಿಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು. ಯಾವುದೇ ಕಾರಣಕ್ಕೂ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬಾರದು ಎಂದು ಮನವಿ ಮಾಡಲಾಗಿದೆ.