ಕೊಪ್ಪಳ : ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಕೊಪ್ಪಳ ಸೇರಿದಂತೆ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೊಪ್ಪಳದಲ್ಲಿ 5 ಕಡೆ ಅಧಿಕಾರಿಗಳು ದಾಳಿ ನಡೆಸಿದ್ದು, ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಅಕ್ರಮ ಆಸ್ತಿ ಸಂಪಾದಿಸಿದ ಆರೋಪದ ಮೇರೆಗೆ ಈ ದಾಳಿ ನಡೆದಿದೆ. ಕೊಪ್ಪಳ ನಗರಸಭೆ ಕಚೇರಿ ಸಿಬ್ಬಂದಿ ಹಾಗೂ ಗುತ್ತಿಗೆದಾರರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಕೊಪ್ಪಳ ನಗರಸಭೆ ಅಧ್ಯಕ್ಷ ಅಹಮದ್ ಪಟೇಲ್ ಮನೆ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.