ಬೆಂಗಳೂರು : ಜಾತಿ ಸಮೀಕ್ಷೆಯ ವೇಳೆ ವಿವಿಧ ಕ್ರಿಶ್ಚಿಯನ್ ಜಾತಿಗಳನ್ನು ಸೇರಿಸಿ ಹಿಂದೂಗಳಲ್ಲಿ ದೊಡ್ಡ ಗೊಂದಲ ಸೃಷ್ಟಿಸಲು ಕಾಂಗ್ರೆಸ್ ಸರಕಾರ ಹೊರಟಿದೆ ಎಂದು ಮಾಜಿ ಸಚಿವ ಮತ್ತು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಆಪಾದಿಸಿದ್ದಾರೆ.
ಯಲಹಂಕದ ಸಿಂಗನಾಯಕನಹಳ್ಳಿಯ ರಮಡ ರೆಸಾರ್ಟ್ ನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಕಾಂತರಾಜು ವರದಿಗಾಗಿ ಸಿದ್ದರಾಮಯ್ಯನವರ ಸರಕಾರ 165 ಕೋಟಿ ರೂ. ಖರ್ಚು ಮಾಡಿತ್ತು. ಅವರೇ ರಚಿಸಿದ ಆಯೋಗ ಅದಾಗಿತ್ತು ಎಂದು ಗಮನ ಸೆಳೆದರು. ಅದನ್ನು ಸ್ವೀಕರಿಸಿದ್ದಾಗಿ ಹೇಳಿದರೂ ಪ್ರಕಟಿಸಲಿಲ್ಲ; ಅನುಷ್ಠಾನವನ್ನೂ ಮಾಡಿಲ್ಲ ಎಂದು ಟೀಕಿಸಿದರು.
ಹೈಕಮಾಂಡ್ ಹೇಳಿದ ಕಾರಣಕ್ಕೆ 165 ಕೋಟಿ ರೂ. ಖರ್ಚು ಮಾಡಿದ ವ್ಯವಸ್ಥೆಯನ್ನು ಮೂಲೆಗುಂಪು ಮಾಡಿದ್ದಾರೆ. ಈಗ ಹೊಸ ಜಾತಿ ಜನಗಣತಿ, ಸಾಮಾಜಿಕ, ಶೈಕ್ಷಣಿಕ ಗಣತಿ ಮಾಡಲು ಹೊರಟಿದ್ದಾರೆ ಎಂದು ಆಕ್ಷೇಪಿಸಿದರು.