ದಾವಣಗೆರೆ : ನವರಾತ್ರಿ ಪ್ರಯುಕ್ತ ನಗರದ ಕಾಳಿಕಾದೇವಿ ರಸ್ತೆಯಲ್ಲಿರುವ ಶ್ರೀ ಕಾಳಿಕಾ ದೇವಿ ವಿಶ್ವಕರ್ಮ ದೇವಸ್ಥಾನದಲ್ಲಿ ಸೆ. 22ರ ಸೋಮವಾರ ಪ್ರಾತಃಕಾಲ ಗಣಪತಿ ಪೂಜೆ, ಪುಣ್ಯಾಹ ವಾಚನ ಘಟಸ್ಥಾಪನೆ ಮತ್ತು ಧ್ವಜಾರೋಹಣ ನಡೆಯುವುದು.
ಇಂದಿನಿಂದ ಬರುವ ಅ. 02ರ ಗುರುವಾರದವರೆಗೆ ಶ್ರೀ ಅಮ್ಮನವರಿಗೆ ವೇದೋಕ್ತ ಪಂಚಾಮೃತಾಭಿಷೇಕ, ದುರ್ಗಾಹೋಮ ಮತ್ತು ಪುಷ್ಪಾಲಂಕಾರ, ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ದಿನಾಂಕ 30ರ ಮಂಗಳವಾರ ದುರ್ಗಾಷ್ಟಮಿ, ಅ. 01ರ ಬುಧವಾರ ಆಯುಧ ಪೂಜೆ, 02ರ ಗುರುವಾರ ವಿಜಯದಶಮಿ ಹಾಗೂ ಸಂಜೆ 6.30ಕ್ಕೆ ಪಾಲಕಿ ಉತ್ಸವದೊಂದಿಗೆ ಬನ್ನಿ ಮುಡಿಯುವುದು ನಂತರ ಪ್ರಸಾದ ವಿನಿಯೋಗವಿರುತ್ತದೆ. ಪ್ರತಿ ದಿನ ಸಂಜೆ 6 ರಿಂದ 7 ರವರೆಗೆ ಶ್ರೀ ಕಾಳಿಕಾದೇವಿ ಮಹಿಳಾ ಭಜನಾ ಮಂಡಳಿಯಿಂದ ಲಲಿತಾ ಸಹಸ್ರನಾಮ ಪಾರಾಯಣ ಮತ್ತು ಸಂಜೆ 7 ರಿಂದ 9 ರವರೆಗೆ ಕೆ.ಹೆಚ್. ಕುಮಾರಾಚಾರ್ ಮತ್ತು ಸಂಗಡಿಗರಿಂದ ಶ್ರೀ ದೇವಿಯ ಪಾರಾಯಣ ನಡೆಯಲಿದೆ.
ಅ.1ರ ಬುಧವಾರ ರಾತ್ರಿ 8ಕ್ಕೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ ಎಂದು ಶ್ರೀ ಕಾಳಿಕಾದೇವಿ ವಿಶ್ವಕರ್ಮ ದೇವಸ್ಥಾನ ಆಡಳಿತ ಸಮಿತಿ ಟ್ರಸ್ಟ್ ತಿಳಿಸಿದೆ.