ಚಿತ್ರದುರ್ಗ : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ, ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೊಗ ಕೈಗೊಳ್ಳುವ ನಿಟ್ಟಿನಲ್ಲಿ ಹಲವು ಯೋಜನೆಗಳಿಗೆ ಆರ್ಥಿಕ ಸಹಾಯವನ್ನು ಒದಗಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನೇರ ಸಾಲ ಯೋಜನೆಯಡಿ ಹಸುಸಾಕಾಣಿಕೆ, ಗುಡಿ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಸೇರಿದಂತೆ ಇತರೆ ವೃತ್ತಿ ವ್ಯಾಪಾರ ವಹಿವಾಟು ನಡೆಸಲು ರೂ.1 ಲಕ್ಷ ಹಾಗೂ ರೂ.2 ಲಕ್ಷ ಆರ್ಥಿಕ ನೆರವು ಒದಗಿಸಲಾಗುವುದು. ಶೇ.4% ವಾರ್ಷಿಕ ಬಡ್ಡಿ ದರದಲ್ಲಿ ರೂ.20,000 ಸಹಾಯಧನ ನೀಡಲಾಗುವುದು.
ಅರ್ಜಿದಾರರು ಕರ್ನಾಟಕ ರಾಜ್ಯಕ್ಕೆ ಸೇರಿದ ಬ್ರಾಹ್ಮಣ ಸಮುದಾಯದವರಾಗಿದ್ದು, ಆರ್ಥಿಕವಾಗಿ ಹಿಂದುಳಿದ ಪ್ರಮಾಣ ಪತ್ರ ಹೊಂದಿರಬೇಕು. 18 ರಿಂದ 65 ವರ್ಷದ ಒಳಗಿರಬೇಕು. ಯೋಜನೆಗಳಲ್ಲಿ ಮಹಿಳೆಯರಿಗೆ ಶೇ.33 ಹಾಗೂ ದಿವ್ಯಾಂಗರಿಗೆ ಶೇ.5 ರಷ್ಟು ಮಿಸಲಾತಿಯಿದೆ. ಅರ್ಜಿದಾರರ ಆಧಾರ್ ಮೊಬೈಲ್ ಹಾಗೂ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು.
ಅರ್ಜಿಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ www.ksbdb.karnataka.gov.in ದೂರವಾಣಿ ಸಂಖ್ಯೆ 8029605888 ಅಥವಾ 8762249230 ಕರೆ ಮಾಡಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

































