ಮೈಸೂರು : ಕನ್ನಡದ ಹಿರಿಯ ಸಾಹಿತಿ, ಕಾದಂಬರಿಕಾರ, ಪದ್ಮಭೂಷಣ ಡಾ. ಎಸ್.ಎಲ್ ಭೈರಪ್ಪ ಅವರು ಶುಕ್ರವಾರ ಪಂಚಭೂತಗಳಲ್ಲಿ ಲೀನರಾದರು.
ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ಜರುಗಿತು. ಪಾರ್ಥಿವ ಶರೀರಕ್ಕೆ ಮಾನಸ ಪುತ್ರಿ ಸಹನಾ ವಿಜಯಕುಮಾರ್ ಅವರು ಅಂತಿಮ ನಮನ ಸಲ್ಲಿಸಿದ ಬಳಿಕ ಪುತ್ರರು ಅಗ್ನಿಸ್ಪರ್ಶ ಮಾಡಿದರು.
ಅನಾರೋಗ್ಯದಿಂದ ಆಸ್ಪತ್ರೆಗೆ ಸೇರಿದ್ದ ಸಾಹಿತಿ ಎಸ್.ಎಲ್.ಭೈರಪ್ಪ ಹೃದಯಾಘಾತದಿಂದ ಸೆ. 24ರಂದು ವಿಧಿವಶರಾದರು. ಇಂದು ಅವರ ಅಂತ್ಯಕ್ರಿಯೆ ನೆರವೇರಿಸಲಾಗಿದ್ದು, ಸಕಲ ಸರ್ಕಾರಿ ಗೌರವದೊಂದಿಗೆ ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ ನೆರವೇರಿಸಲಾಗಿದೆ.
ಅಂತ್ಯಸಂಸ್ಕಾರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸಚಿವರಾದ ಹೆಚ್.ಸಿ ಮಹದೇವಪ್ಪ, ಕೆ.ವೆಂಕಟೇಶ್, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ ಹಲವು ಗಣ್ಯರು ಪಾಲ್ಗೊಂಡಿದ್ದರು.