ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎನ್.ಮಂಜುಳಾ ಅವರನ್ನು ಇಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಅಲ್ಲದೇ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಲಾಗಿದೆ.
ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ಜಂಟಿ ಕಾರ್ಯದರ್ಶಿ ಗೋವಿಂದ ರೆಡ್ಡಿಯವನ್ನು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಇಲಾಖೆಯ ಆಯುಕ್ತರನ್ನಾಗಿ ಹಾಗೂ ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಎಸ್.ಪೂವಿತಾ ಅವರನ್ನು ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ.