ಚಿತ್ರದುರ್ಗ : ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ನೇಮಕಗೊಂಡಿರುವ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ದೊಡ್ಡಕೆರೆ ಹೆಚ್.ಜಿ. ಮಂಜಪ್ಪ ಅವರು ಸೆ. 29 ರಂದು ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗದ ತಮಟಕಲ್ ರಸ್ತೆಯಲ್ಲಿರುವ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಕಚೇರಿಯಲ್ಲಿ ಅಧಿಕಾರ ವಹಿಸಿಕೊಳ್ಳುವರು ಎಂದು ಮಂಡಳಿಯ ಕಾರ್ಯದರ್ಶಿ ಸತೀಶ್ ರೆಡ್ಡಿ ತಿಳಿಸಿದ್ದಾರೆ.
