ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಜನ್-12 ಆರಂಭವಾಗಲಿದೆ. ಈಗಾಗಲೇ ಭಾರಿ ಸಿದ್ಧತೆಗಳು ಆರಂಭವಾಗಿವೆ. ಈನಡುವೆ ಕನ್ನಡ ಬಿಗ್ ಬಾಸ್ ಸೀಜನ್ ಗೆ ಯುವಕನೊಬ್ಬ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.
ಹೌದು ಇನ್ಸ್ಟಾಗ್ರಾಮ್ ಅಲ್ಲಿ ಯುವಕನಿಂದ ಬೆದರಿಕೆ ವಿಡಿಯೋ ವೈರಲ್ ಆಗಿದ್ದು ಬಿಗ್ ಬಾಸ್ ಗೆ ನನ್ನ ಕರೆದಿಲ್ಲ ಆದರೆ ನಾನು ಬಾಂಬ್ ಇಡುತ್ತೇನೆ ಮಮ್ಮಿ ಅಶೋಕ್ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ಒಂದು ವಿಡಿಯೋ ಪೋಸ್ಟ್ ಮಾಡಿದ್ದು ವಿಡಿಯೋ ಬಗ್ಗೆ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪೊಲೀಸರು ಸ್ವಯಂ ಪ್ರೇರಿತವಾಗಿ NCR ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಶೋಕ್ ಎಂಬ ಯುವಕನನ್ನು ಕರೆದು ಪೊಲೀಸರು ಎಚ್ಚರಿಕೆ ಕೊಟ್ಟು ಕಳುಹಿಸಿದ್ದಾರೆ. ಫಾಲೋವರ್ಸ್ ಹೆಚ್ಚಿಸಿಕೊಳ್ಳಲು ಈ ರೀತಿ ಮಾಡಿದಾಗ ಎಂದು ವಿಚಾರಣೆ ವೇಳೆ ಮಾಡಿದ್ದೇನೆ ಎಂದು ಬಾಯಿಬಿಟ್ಟಿದ್ದಾನೆ.