ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ 2025 ರ ಏಷ್ಯಾಕಪ್ (Asia Cup 2025) ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ (India vs Pakistan) ತಂಡಗಳು ಮುಖಾಮುಖಿಯಾಗಿದ್ದವು.
41 ವರ್ಷಗಳ ಏಷ್ಯಾಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಉಭಯ ತಂಡಗಳ ನಡುವೆ ಫೈನಲ್ ಪಂದ್ಯ ನಡೆಯಿತು. ಇಡೀ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಯಾವ ರೀತಿಯ ಮೇಲುಗೈ ಸಾಧಿಸಿತ್ತೋ ಅದೇ ರೀತಿ ಫೈನಲ್ ಪಂದ್ಯದಲ್ಲೂ ಪಾಕಿಸ್ತಾನದ ವಿರುದ್ಧ ವಿರೋಚಿತ ಪ್ರದರ್ಶನ ನೀಡಿ ಏಷ್ಯನ್ ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಯಿತು.
ಈ ಮೂಲಕ ಟೀಂ ಇಂಡಿಯಾ ದಾಖಲೆಯ 9ನೇ ಬಾರಿಗೆ ಏಷ್ಯಾಕಪ್ ಟ್ರೋಫಿಯನ್ನು ಎತ್ತಿಹಿಡಿಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 19.1 ಓವರ್ಗಳಲ್ಲಿ 146 ರನ್ಗಳಿಗೆ ಆಲೌಟ್ ಆಯಿತು. ಗುರಿ ಬೆನ್ನಟ್ಟಿದ ಭಾರತ 5 ವಿಕೆಟ್ ಕಳೆದುಕೊಂಡು ಕೊನೆಯ ಓವರ್ನಲ್ಲಿ ಗೆಲುವು ಸಾಧಿಸಿತು.