ಮಂಡ್ಯ: ಹೌದು ಮುಂದಿನ ತಿಂಗಳು ನವೆಂಬರ್ ನಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಅಗಲಿದ್ದಾರೆ ಎಂದು ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಭವಿಷ್ಯ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ. ಡಿ.ಕೆ. ಶಿಕುಮಾರ್ ಅವರ ಹೋರಾಟಕ್ಕೆ ಫಲ ಸಿಕ್ಕೇ ಸಿಗುತ್ತದೆ ಎಂದು ಹೇಳಿದ್ದಾರೆ.
ನವೆಂಬರ್ ನಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವ ವಿಶ್ವಾಸವಿದೆ. ಎರಡೂವರೆ ವರ್ಷ ಅಧಿಕಾರ ಹಂಚಿಕೆಯಾಗಿರುವ ಬಗ್ಗೆ ಮಾಹಿತಿ ಇದೆ ಎಂದು ನಾಗಮಂಗಲದಲ್ಲಿ ಶಿವರಾಮೇಗೌಡ ತಿಳಿಸಿದ್ದಾರೆ.