ಬೆಂಗಳೂರು: ಅನಾರೋಗ್ಯದ ಹಿನ್ನೆಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಿಹಾರ ಚುನಾವಣೆ, ಸರಣಿ ಪ್ರವಾಸದಿಂದಾಗಿ ಉಸಿರಾಟದ ಸಮಸ್ಯೆ ಉಂಟಾದ ಹಿನ್ನೆಲೆ ಜನರಲ್ ಚೆಕಪ್‌ಗಾಗಿ ಆಸ್ಪತ್ರೆ ದಾಖಲಾಗಿದ್ದು, ವೈದ್ಯರು ನಿತ್ಯದ ಚೆಕಪ್ ನಡೆಸಿರುವುದಾಗಿ ತಿಳಿದುಬಂದಿದೆ. ಇನ್ನೂ ಇದೇ ವೇಳೆ ವೈದ್ಯರು ಇಸಿಜಿ ಪರೀಕ್ಷೆ ಮಾಡಿದ್ದು, ಬುಧವಾರ ರಾತ್ರಿ ಖರ್ಗೆಯವರು ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ.