ಹೊಸಪೇಟೆ; ಖ್ಯಾತ ಸಾಹಿತಿ, ಹಿರಿಯ ಕತೆಗಾರ ಪ್ರೊ. ಮೊಗಳ್ಳಿ ಗಣೇಶ್ (64) ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೊಸಪೇಟೆಯ ನಿವಾಸದಲ್ಲಿ ನಿಧನರಾಗಿದ್ದು, ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ. ಹಂಪಿ ಕನ್ನಡ ವಿವಿಯಲ್ಲಿ 28 ವರ್ಷ ಪ್ರಾಧ್ಯಾಪಕರಾಗಿದ್ದ ಮೊಗಳ್ಳಿ ಗಣೇಶ್ ತಮ್ಮ ವಿಶಿಷ್ಟ ಶೈಲಿಯ ಕಥೆಗಳ ಮೂಲಕ ಅವರು ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದವರು.
ಇವರು ‘ಸೂರ್ಯನನ್ನು ಬಚ್ಚಿಡಬಹುದೆ?’ ಹಾಗು ‘ಅನಾದಿ’ ಕಾವ್ಯ ಸಂಕಲನಗಳ ಮೂಲಕ ಪ್ರಸಿದ್ಧರಾಗಿದ್ದರು.