ಜೈಪುರ: ಸರ್ಕಾರಿ ಸ್ವಾಮ್ಯದ ಸವಾಯಿ ಮಾನ್ ಸಿಂಗ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಆರು ರೋಗಿಗಳು ಸಾವನ್ನಪ್ಪಿರುವ ಘಟನೆ ಜೈಪುರದ ನಡೆದಿದೆ.
ಟ್ರಾಮಾ ಸೆಂಟರ್ ಕಟ್ಟಡದ ಎರಡನೇ ಮಹಡಿಯಲ್ಲಿರುವ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿತು. ಆ ಸಮಯದಲ್ಲಿ, ಐಸಿಯುನಲ್ಲಿ 11 ರೋಗಿಗಳು ದಾಖಲಾಗಿದ್ದರು. ಅವರಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಇಬ್ಬರು ಮಹಿಳೆಯರು ಮತ್ತು ನಾಲ್ವರು ಪುರುಷರು ಸಾವನ್ನಪ್ಪಿದ್ದಾರೆ ಎಂದು ಟ್ರಾಮಾ ಸೆಂಟರ್‌ನ ಉಸ್ತುವಾರಿ ಡಾ. ಅನುರಾಗ್ ಧಾಕಡ್ ತಿಳಿಸಿದ್ದಾರೆ.
ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಪ್ರಾಥಮಿಕ ಕಾರಣ ಎಂದು ಅವರು ಹೇಳಿದರು. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
(ಸಾಂದರ್ಭಿಕ ಚಿತ್ರ)