ದೆಹಲಿ: ಭಾರತ ಚುನಾವಣಾ ಆಯೋಗ (ECI) ಬಿಹಾರ ವಿಧಾನಸಭಾ ಕ್ಷೇತ್ರದ ಚುನಾವಣಾ ದಿನಾಂಕ ಘೋಷಿಸಿದೆ.
ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, . ಮೊದಲ ಹಂತದ ಮತದಾನ ನವೆಂಬರ್ 6ರಂದು ಮತ್ತು 2ನೇ ಹಂತದ ಮತದಾನ ನವೆಂಬರ್ 11ರಂದು ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.
243 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ನವೆಂಬರ್ 14ರಂದು ಚುನಾವಣಾ ಫಲಿತಾಂಶ ಬಿಡುಗಡೆಯಾಗಲಿದೆ. ಇನ್ನು 7.43 ಕೋಟಿ ಮತದಾರರಿದ್ದು, 90412 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.