ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2-3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಾಳೆಯಿಂದ ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಎರಡು ದಿನ ಮತ್ತು ಹಾಸನ, ಕೊಡಗು, ಮೈಸೂರಿನಲ್ಲಿ ಅ.15ರಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಇನ್ನು ಉಡುಪಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಾಧಾರಣ ಮಳೆ ಯಾಗಲಿದೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.