ಬೆಂಗಳೂರು: ಆಡಳಿತಾತ್ಮಕ ದೃಷ್ಟಿಯಿಂದ ಹಿರಿಯ ಐಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹುದ್ದೆ ನಿರೀಕ್ಷೆಯಲ್ಲಿದ್ದ ಮೂವರು ಅಧಿಕಾರಿಗಳನ್ನು ವಿವಿಧ ಇಲಾಖೆಗಳಿಗೆ ನಿಯೋಜಿಸಲಾಗಿದೆ.ಕೈಗಾರಿಕಾ ಇಲಾಖೆ ಕಾರ್ಯದರ್ಶಿ ನಿತೇಶ್ ಪಾಟೀಲ್ ಅವರನ್ನು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ನೇಮಕ ಮಾಡಲಾಗಿದೆ.
ಆರ್. ರಾಮಚಂದ್ರನ್ ಅವರನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯನಿರ್ವಾಹಕ ನಿರ್ದೇಶಕರಾಗಿ, ಡಾ.ಬಿ.ಸಿ. ಸತೀಶ್ ಅವರನ್ನು ಕೈಗಾರಿಕಾ ಇಲಾಖೆ ನಿರ್ದೇಶಕರಾಗಿ, ಎಂ.ಎಸ್. ದಿವಾಕರ್ ಅವರನ್ನು ಕೆ.ಎಸ್.ಎನ್.ಡಿ.ಎಂ.ಸಿ. ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
ಎಂ.ಎಸ್. ದಿವಾಕರ್ ಅವರಿಗೆ ಅಟಲ್ ಜನಸ್ನೇಹಿ ಕೇಂದ್ರದ ನಿರ್ದೇಶಕ ಹುದ್ದೆ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.
ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಿ. ರಂದೀಪ್ ಅವರಿಗೆ ಸಮಾಜ ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.