ಗ್ಯಾಸ್ ಗೀಸರ್ ಅನಿಲ ಸೋರಿಕೆಯಿಂದ ಅಕ್ಕ-ತಂಗಿ ಮೃತಪಟ್ಟಿದ್ದಾರೆ.
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಇಬ್ಬರು ಯುವತಿಯರು ಪ್ರಾಣ ಕಳೆದುಕೊಂಡಿದ್ದಾರೆ.
ಮೃತರನ್ನು ಗುಲ್ಫಾರ್ಮ್ (23) ಮತ್ತು ಸಿಮ್ರಾನ್ ತಾಜ್ (20) ಎಂದು ಗುರುತಿಸಲಾಗಿದೆ. ಸ್ನಾನ ಮಾಡಲು ಬಾತ್ರೂಮ್ ಒಳಗೆ ತೆರಳಿದ್ದವರು ಬಹಳ ಹೊತ್ತಾದರೂ ಹೊರಬಂದಿರಲಿಲ್ಲ. ಹೀಗಾಗಿ ಅವರ ತಂದೆ ಅಲ್ತಾಫ್ ಬಾಗಿಲು ಒಡೆದು ನೋಡಿದ್ದಾರೆ.
ಆಗ ಇಬ್ಬರೂ ಅರೆಪ್ರಜ್ಞಾವಸ್ಥೆಯಲ್ಲಿ ಇರುವುದು ಕಾಣಿಸಿದೆ. ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಇಬ್ಬರೂ ಮೃತಪಟ್ಟಿದ್ದಾರೆ
































