ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್ 2025)ಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ.
ನವೆಂಬರ್ 2ರಂದು ಪರೀಕ್ಷೆ ನಡೆಯಲಿದೆ. ನವೆಂಬರ್ 2ರ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಲವು ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯಲಿದೆ. ಕೆಲವು ವಿಷಯದ ಪರೀಕ್ಷೆಗಳಿಗೆ ಬೆಂಗಳೂರಿನಲ್ಲಿ ಮಾತ್ರ ಪರೀಕ್ಷಾ ಕೇಂದ್ರ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಂಖ್ಯೆ ನಮೂದಿಸಿ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದಾಗಿದೆ.






























