ಮೊಂಥಾ ಚಂಡಮಾರುತದ ಪರಿಣಾಮ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ.
ಮಂಗಳವಾರ ಸಂಜೆ ಅಥವಾ ರಾತ್ರಿ ಆಂಧ್ರದ ಕರಾವಳಿ ಭಾಗಕ್ಕೆ ಮೊಂಥಾ ಚಂಡಮಾರುತ ಅಪ್ಪಳಿಸಲಿದೆ. ಪರಿಣಾಮ ಎರಡು ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಲಬುರಗಿ, ಕೊಪ್ಪಳ, ಬಾಗಲಕೋಟೆ, ಗದಗ, ಬೀದರ್, ಬೆಂಗಳೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಸೇರಿದಂತೆ ಅನೇಕ ಜಿಲ್ಲೆಗಳಿಗೆ ಎರಡು ದಿನ ಯಲ್ಲೋ ಅಲರ್ಟ್ ಘೋಷಣೆಯಾಗಿದೆ.
ಅಕ್ಟೋಬರ್ 30ರ ಬಳಿಕ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಅಕ್ಟೋಬರ್ 28 ಹಾಗೂ 29ರಂದು ಗಾಳಿಯ ತೀವ್ರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
































