ಚಿತ್ರದುರ್ಗ: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಇದೇ ಅ.30 ಮತ್ತು 31ರಂದು ಚಿತ್ರದುರ್ಗ ನಗರದ ಪ್ರಧಾನ ಅಂಚೆ ಕಚೇರಿ ಪಕ್ಕದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ.
ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ನೀಡಲಾಗುವುದಿಲ್ಲ. ತರಬೇತಿಗೆ 25 ಜನರ ಗುರಿ ನಿಗಧಿಪಡಿಸಲಾಗಿದ್ದು. ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, ಎರಡು ಪಾಸ್ ಪೋರ್ಟ್ ಸೈಜ್ ಪೋಟೋ, ಬ್ಯಾಂಕ್ ಪಾಸ್ ಬುಕ್ ಪ್ರತಿ ತರುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಗಳೊಂದಿಗೆ ತರಬೇತಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9482943111, 9886002248ಗೆ ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

































