ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಮೋಂಥಾ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಇಂದು, ನಾಳೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 2 ದಿನ ಉತ್ತರ ಕನ್ನಡ, ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನು ಬೆಳಗಾವಿ, ಧಾರಾವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

































