ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ಸತೀಶ್ ದಂಪತಿಯ ಮನೆಯಲ್ಲಿ ನಿಗೂಢ ರಕ್ತದ ಕಲೆಗಳು ಕಾಣಿಸಿಕೊಂಡಿರುವುದು ಗ್ರಾಮದೆಲ್ಲೆಡೆ ಆತಂಕ ಮೂಡಿಸಿದೆ.
ಸತೀಶ್ ದಂಪತಿ ತಮ್ಮ ಇಬ್ಬರು ಮಕ್ಕಳನ್ನು ಬೆಂಗಳೂರಿನಲ್ಲಿ ವಿದ್ಯಾಭ್ಯಾಸಕ್ಕೆ ಸೇರಿಸಿ ಮನೆಯಲ್ಲಿ ಇಬ್ಬರೇ ವಾಸವಾಗಿದ್ದರು. ಸೋಮವಾರ ಬೆಳಿಗ್ಗೆ ಸತೀಶ್ ಅವರ ಪತ್ನಿ ಮನೆ ಸ್ವಚ್ಛಗೊಳಿಸಿ, ಉಪಹಾರ ತಯಾರಿಸಲು ಅಡುಗೆಮನೆಗೆ ತೆರಳಿದ್ದರು.
ಕೆಲವೇ ಕ್ಷಣಗಳಲ್ಲಿ ಮನೆ ಹಾಲ್, ಬಾತ್‌ರೂಂ, ಟಿವಿ ಹಾಗೂ ಫ್ಯಾನ್‌ಗಳ ಮೇಲೆ ರಕ್ತದ ಕಲೆಗಳು ಕಾಣಿಸಿಕೊಂಡವು. ಬೆಚ್ಚಿಬಿದ್ದ ದಂಪತಿಗಳು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಮತ್ತು ಎಫ್‌ಎಸ್‌ಎಲ್ ಶ್ವಾನದಳ ಸ್ಥಳ ಪರಿಶೀಲನೆ ನಡೆಸಿದೆ.
ರಕ್ತದ ಮಾದರಿ ಲ್ಯಾಬ್‌ಗೆ ಕಳುಹಿಸಲಾಗಿದ್ದು, ತನಿಖೆ ಮುಂದುವರಿದಿದೆ.

































