ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ 8ನೇ ವೇತನ ಆಯೋಗದ ಶಿಫಾರಸು ಜಾರಿಗೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಕೇಂದ್ರ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಚಿವ ಅಶ್ವಿನಿ ವೈಷ್ಣವ್, ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು 8ನೇ ಕೇಂದ್ರ ವೇತನ ಆಯೋಗದ ಉಲ್ಲೇಖಿತ ನಿಯಮಗಳನ್ನು ಅನುಮೋದಿಸಿದೆ ಎಂದು ತಿಳಿಸಿದ್ದಾರೆ.
8ನೇ ಕೇಂದ್ರ ವೇತನ ಆಯೋಗದ ನಿಯಮಗಳು ಮತ್ತು ಅವಧಿಯನ್ನು ಪ್ರಧಾನಿ ಮೋದಿ ಅನುಮೋದಿಸಿದ್ದಾರೆ. ಇದೊಂದು ಮಹತ್ವದ ನಿರ್ಧಾರ. ಆಯೋಗದ ಶಿಫಾರಸು ರಕ್ಷಣಾ ಸೇವೆಗಳ ಸಿಬ್ಬಂದಿ ಸೇರಿದಂತೆ ಸುಮಾರು 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು ಸುಮಾರು 69 ಲಕ್ಷ ಪಿಂಚಣಿದಾರರನ್ನು ಒಳಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.

































