ಚಿಕ್ಕಮಗಳೂರು : ಚಿಕ್ಕಮಂಗಳೂರು, ಸೇರಿದಂತೆ ಆ ಭಾಗದಲ್ಲಿ ಆನೆಗಳ ದಾಳಿಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಕೆರೆಗದ್ದೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿಯಾಗಿದ್ದಾರೆ. ಚಿಕ್ಕಮಂಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಗೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.
ಬಿಜೆಪಿಯ ಮುಖಂಡ ಹರೀಶ್ (47) ಮತ್ತು ಉಮೇಶ್ (44) ಮೃತ ದುರ್ದವಿಗಳು ಎಂದು ತಿಳಿದುಬಂದಿದ್ದು, ಸೊಪ್ಪು ತರಲು ಮನೆಯ ಹಿಂಭಾಗ ತೆರಳಿದ್ದಾಗ ಕಾಡಾನೆ ದಾಳಿ ಮಾಡಿದೆ. ಕೆರೆಕಟ್ಟೆ, ಅರಣ್ಯ ವಲಯ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.
 
				 
         
         
         
															 
                     
                     
                     
                    

































 
    
    
        