ಪಶ್ಚಿಮ ಬಂಗಾಳ: ಭಾರೀ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆಯ ಮತಎಣಿಕೆಯು ನಿನ್ನೆ ನಡೆದಿದ್ದು, ಮತಎಣಿಕೆ ಮುಗಿದ ಬಳಿಕವೂ ಹಿಂಸಾಚಾರ ಮುಂದುವರೆದಿದೆ.
ನಿನ್ನೆ ತಡರಾತ್ರಿ ನಡೆದ ಹಿಂಸಾಚಾರದಲ್ಲಿ ಭಾರತೀಯ ಸೆಕ್ಯುಲರ್ ಫ್ರಂಟ್ನ್ ಓರ್ವ ಕಾರ್ಯಕರ್ತ ಸಾವನ್ನಪ್ಪಿದ್ದು, ಓರ್ವ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ. ನಿನ್ನೆ ತಡರಾತ್ರಿ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣಗಳ ಭಂಗಾರ್ ಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಒಂದು ಬೂತ್‌ನಲ್ಲಿ ಮುನ್ನಡೆ ಸಾಧಿಸಿದ್ದ ಐಎಸ್‌ಎಫ್ ಅಭ್ಯರ್ಥಿಯೊಬ್ಬರು ಎಣಿಕೆಯ ಕೊನೆಯ ಸುತ್ತಿನಲ್ಲಿ ಸೋತ ನಂತರ ಘರ್ಷಣೆ ಆರಂಭವಾಯಿತು.
ಸ್ಥಳದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದರಿಂದ ಉದ್ವಿಗ್ನತೆ ಹೆಚ್ಚಿತ್ತು. ಘರ್ಷಣೆಯ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೈಗೆ ಗುಂಡು ತಗುಲಿದೆ. ಗಾಯಗೊಂಡ ಅಧಿಕಾರಿಯನ್ನು ತಕ್ಷಣ ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು.